ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ

ವಿಜಯಪುರ ಜ.೧೧: ಸ್ವಚ್ಛಭಾರತ ಮಿಷನ್ ಯೋಜನೆ ಅಡಿಯಲ್ಲಿ ವಿಜಯಪುರ ಮಹಾನಗರಪಾಲಿಕೆಯು ಈಗಾಗಲೇ ಕೊಳಗೇರಿ ಪ್ರದೇಶ, ವಾಣಿಜ್ಯ ಸಂಕೀರ್ಣಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸಮುದಾಯ ಹಾಗೂ ಸಾರ್ವಜನಿಕ ಶೌಚಾಲಯಗಳನ್ನು ಸಾರ್ವಜನಿಕರು ಬಯಲಿನಲ್ಲಿ ಶೌಚಕ್ಕೆ ತೆರಳದಂತೆ ಸಮುದಾಯ ಶೌಚಾಲಯಗಳನ್ನು ಹಾಗೂ ವಾಣಿಜ್ಯ, ಮಾರ್ಕೆಟ್ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಎಲ್ಲಾ ಸೌಲಭ್ಯಗಳೊಂದಿಗೆ ಅಂದರೆ ನೀರಿನ ವ್ಯವಸ್ಥೆ, ಒಳಚರಂಡಿ, ಸೆಪ್ಟಿಕ್ ಟ್ಯಾಂಕ್ ಸಂಪರ್ಕ, ವಿದ್ಯುತ್ ಸಂಪರ್ಕ ಇತ್ಯಾದಿ ವ್ಯವಸ್ಥೆಗಳೊಂದಿಗೆ ಸಾರ್ವಜನಿಕ ಅನೂಕೂಲಕ್ಕಾಗಿ ನಿರ್ಮಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಹರ್ಷಾ ಶೆಟ್ಟಿ ಅವರು ತಿಳಿಸಿದ್ದಾರೆ.
ಅದರಂತೆ ವೈಯಕ್ತಿಕವಾಗಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಕೊಳ್ಳಲು ಈ ಯೋಜನೆ ಮೂಲಕ ಫಲಾನುಭವಿಗಳಿಗೆ ಸಹಾಯ ಧನವನ್ನು ನೀಡಿ ಪ್ರೋತ್ಸಾಹಿಸಲಾಗಿದ್ದು ಅರ್ಹ ಫಲಾನುಭವಿಗಳು ವೈಯಕ್ತಿಕ ಶೌಚಾಲಯಗಳನ್ನು ಸಂಪೂರ್ಣವಾಗಿ ನಿರ್ಮಿಸಿಕೊಂಡಿರುತ್ತಾರೆ.
ಸ್ವಚ್ಛಭಾರತ ಮಿಷನ್ ಯೋಜನೆಯ ಎಲ್ಲಾ ಮಾನದಂಡಗಳನ್ನು ಅನುಸರಿಸಿ ನಗರವನ್ನು ಬಯಲು ಶೌಚಮುಕ್ತ ನಗರ ಎಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ, ಸಂಘ ಸಂಸ್ಥೆಗಳಿAದ, ಸಲಹೆ ಸೂಚನೆಗಳು, ಆಕ್ಷೇಪಣೆಗಳನ್ನು ಘನತ್ಯಾಜ್ಯ ವಸ್ತು ನಿರ್ವಹಣೆ ವಿಭಾಗ, ವಿಜಯಪುರ ಮಹಾನಗರಪಾಲಿಕೆಯ, ವಿಜಯಪುರ ಕಚೇರಿಗೆ ಲಿಖಿತ ರೂಪದಲ್ಲಿ ದಿನಾಂಕ; ೨೬-೦೧-೨೦೨೧ ರೊಳಗಾಗಿ ಸಲ್ಲಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave A Reply

Your email address will not be published.