ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹಾದೇವಪ್ಪ ಯಾದವಾಡ ಚಾಲನೆ

ರಾಮದುರ್ಗ: ಪಟ್ಟಣದ ಪ್ರಮುಖ ರಸ್ತೆಗಳ ಜೊತೆಗೆ ಒಳ ರಸ್ತೆಗಳನ್ನು ಅಭಿವೃದ್ಧಿಯಿಂದ ನಗರವನ್ನು ಇನ್ನಷ್ಟು ಸುಂದರಗೊಳಿಸಲಾಗುವುದು. ಅದಕ್ಕಾಗಿ ಸರ್ಕಾರದಿಂದ ಸಾಕಷ್ಟು ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಸೋಮವಾರ ರೂ. ೨.೧೦ ಕೋಟಿ ವೆಚ್ಚದಲ್ಲಿ ಪಟ್ಟಣದ ಒಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಂದಿಗಳಲ್ಲಿ ಮಾಡುವ ಕಾಮಗಾರಿಗೆ ಅಡೆತಡೆಗೊಳ್ಳುವ ಅತಿಕ್ರಮಣಗಳನ್ನು ತೆರವುಗೊಳಿಸುವ ಮೂಲಕ ಸುಗಮ ಕಾಮಗಾರಿಗೆ ಸಹಕಾರ ನೀಡಬೇಕೆಂದು ಹೇಳಿದರು.
ಪಟ್ಟಣದ ಸೌಂದರ್ಯಕ್ಕೆ ಪೂರಕವಾಗಿರುವ ಇಕ್ಕೆಲಗಳ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಕಾಮಗಾರಿ ಜರುಗಿದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಶಂಕರಪ್ಪ ಬೆಣ್ಣೂರ, ಉಪಾಧ್ಯಕ್ಷ ರಾಘವೇಂದ್ರ ದೊಡಮನಿ, ಸಂಗೀತಾ ರಾಯಬಾಗ, ಗೀತಾ ದೊಡಮನಿ, ಮುಖ್ಯಾಧಿಕಾರಿ ಎಸ್.ಜಿ. ಅಂಬಿಗೇರ, ಜ್ಯೋತಿ ಸಜ್ಜನ, ದತ್ತಣ್ಣ ಮಹಾಲಿಂಗಪೂರ, ಕಾಲೋನಿಯ ಗಣ್ಯರು ಇದ್ದರು.

 

Leave A Reply

Your email address will not be published.