ಬಸವ ಜ್ಯೋತಿ ರಾಜ್ಯ ಪ್ರಶಸ್ತಿಗೆ ಕೊಳ್ಳೂರ ಆಯ್ಕೆ

0

ಔರಾದ್: ವಿಜಯಪುರ ಜಿಲ್ಲೆಯ ಅಹೇರಿ ಗ್ರಾಮದ ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಂಸ್ಕೃತಿಕ ವೇದಿಕೆಯ 16ನೇ ವಾರ್ಷಿಕೋತ್ಸವ ಅಂಗವಾಗಿ ರಾಜ್ಯ ಮಟ್ಟದ ವಚನ ವಿಜಯೋತ್ಸವ 2020-21 ನೇ ಸಾಲಿನ ‘ಬಸವ ಜ್ಯೋತಿ’ ರಾಜ್ಯ ಪ್ರಶಸ್ತಿಗೆ ಪರಿಸರ ಪ್ರೇಮಿ ರಿಯಾಜಪಾಶಾ ಕೊಳ್ಳೂರ ಆಯ್ಕೆಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ಬಂಡೆಪ್ಪ ತೇಲಿ ತಿಳಿಸಿದ್ದಾರೆ.

ತಾಲ್ಲೂಕಿನ ಕೊಳ್ಳೂರ ಗ್ರಾಮದ ರಿಯಾಜಪಾಶಾ ಅವರು ಪರಿಸರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಯಾಗಿದ್ದು ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಗಳಿಗೆ ಗಿಡ ಮರಗಳಲ್ಲಿ ನೀರು ತುಂಬಿಸುವ ಮೂಲಕ ಮೂಕ ಪ್ರಾಣಿ ಪಕ್ಷಿಗಳ ಸೇವೆ ಸೇರಿದಂತೆ ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿದ್ದಾರೆ.

BJP  Add

ಇತ್ತೀಚೆಗೆ ವಿಶ್ವ ಕನ್ನಡಿಗರ ಸಂಸ್ಥೆಯಿಂದ ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿ ಲಭಿಸಿದೆ.ರಿ

ಯಾಜಪಾಶಾ ಕೊಳ್ಳೂರ ಅವರಿಗೆ ಜ. 15 ರಂದು ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು, ಸಾಹಿತಿಗಳು, ಶಿಕ್ಷಣ ತಜ್ಞರ ಸಮ್ಮುಖದಲ್ಲಿ ಬಸವ ಜ್ಯೋತಿ ರಾಜ್ಯ ಪ್ರಶಸ್ತಿ ನಿಡಿ ಗೌರವಿಸಲಾಗುವುದು.

- Advertisement -

- Advertisement -

Leave A Reply

Your email address will not be published.