vijayapur

ಜ.೧೪ ರಂದು ೨೦೨೧ ನೇ ಸಾಲಿನ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ


ವಿಜಯಪುರ ಜ.೧೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ಥಳೀಯ ಸಂಘ-ಸAಸ್ಥೆಗಳ ಸಂಯುಕ್ತಾಶ್ರಯದಲ್ಲಿ ೨೦೨೧ ನೇ ಸಾಲಿನ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈರಪ್ಪ ಆಶಾಪೂರ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮವು ದಿನಾಂಕ : ೧೪-೦೧-೨೦೨೧ ರಂದು ಗುರುವಾರ ಸಾಯಂಕಾಲ ೪-೩೦ ಗಂಟೆಗೆ ಸ್ಥಳ : ಸಭಾಭವನ ಕಲಗುರ್ಕಿ, ತಾ.ಕೋಲ್ಹಾರ, ಜಿ.ವಿಜಯಪುರದಲ್ಲಿ ಜರುಗಲಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಶಿವಾನಂದ ಪಾಟೀಲ ಅವರು ವಹಿಸಲಿದ್ದು, ಕಾರ್ಯಕ್ರಮಕ್ಕೆ ಅತಿಥಿಗಳಾಗಿ, ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ, ಶಾಸಕ ಎ.ಎಸ್ ಪಾಟೀಲ, ಜಿ,ಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎಂ.ಬಿ ಪಾಟೀಲ, ಬಸನಗೌಡ ಪಾಟೀಲ (ಯತ್ನಾಳ) ಸೇರಿದಂತೆ ಇನ್ನೀತರ ಗಣ್ಯರು ಆಗಮಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply