ಜಿಲ್ಲಾ ಮಟ್ಟದ ಭೂ ಅನುಷ್ಠಾನ ಸಮಿತಿ ಸಭೆ: ಭೂ ಮಾಲೀಕರ ಖುದ್ದು ಹಾಜರಿಗೆ ಸೂಚನೆ

0

ಕೊಪ್ಪಳ ಜ.೧೨: ಭೂ ಒಡೆತನ ಯೋಜನೆಯಡಿ ಭೂ ಮಾಲೀಕರ ಪ್ರಸ್ತಾವನೆಗಳಿಗೆ ದರ ನಿಗದಿ ಪಡಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ.೧೮ ರಂದು ಜಿಲ್ಲಾ ಮಟ್ಟದ ಭೂ ಅನುಷ್ಠಾನ ಸಮಿತಿ ಸಭೆಯನ್ನು ನಿಗದಿಪಡಿಸಲಾಗಿದ್ದು, ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿದ ಭೂ ಮಾಲೀಕರು ಸಭೆಗೆ ಖುದ್ದಾಗಿ ಹಾಜರಾಗುವಂತೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ/ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ/ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ/ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ/ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತಿಸೂಕ್ಷö್ಮ ಸಮುದಾಯಗಳ ಅಭಿವೃದ್ಧಿ ಕೋಶದ ವತಿಯಿಂದ ಕೊಪ್ಪಳ ಜಿಲ್ಲೆಯ ೦೫ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಭೂ ಮಾಲೀಕರ ಪ್ರಸ್ತಾವನೆಗಳಿಗೆ ಭೂ ಅನುಷ್ಠಾನ ಸಮಿತಿ ಸಭೆಯಲ್ಲಿ ಭೂ ಮಾಲೀಕರ ಸಮಕ್ಷಮದಲ್ಲಿ ದರವನ್ನು ನಿಗದಿಪಡಿಸಬೇಕಾಗಿರುತ್ತದೆ. ಆದ್ದರಿಂದ ಸಭೆಗೆ ಭೂ ಮಾಲೀಕರು ಪ್ರತಿನಿಧಿಗಳನ್ನು ಕಳುಹಿಸದೆ ಖುದ್ದಾಗಿ ಹಾಜರಾಗಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

- Advertisement -

Leave A Reply

Your email address will not be published.