ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

0

ಕೊಪ್ಪಳ ಜ.೧೨: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೧೯-೨೦ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆ.೧೫ ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿಯ ಇಲಾಖಾ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಮತ್ತು ಪರಿಶಿಷ್ಟ ವರ್ಗದ ಇಲಾಖಾ ವೆಬ್‌ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು, ಕೊಪ್ಪಳ/ ಗಂಗಾವತಿ/ಯಲಬುರ್ಗಾ/ಕುಷ್ಟಗಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಗಂಗಾವತಿ/ಕುಷ್ಟಗಿ ಇವರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

- Advertisement -

Leave A Reply

Your email address will not be published.