ಜಿಲ್ಲೆಯ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಿ -ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ

0

ವಿಜಯಪುರ ಜ.೧೨: ಜಿಲ್ಲೆಯಲ್ಲಿ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಪಣ ತೊಡಬೇಕೆಂದು ಮಾನ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿಂದು ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿಜಯಪುರ ಜಿಲ್ಲೆಯ ಸ್ವಚ್ಛ ಹಾಗೂ ಸುಂದರ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ನಿರಂತರವಾಗಿ ಶ್ರಮವಹಿಸಬೇಕು ಈ ಕುರಿತು ಪ್ರತಿ ಗ್ರಾಮಗಳಲ್ಲಿಯೂ ಸ್ವಚ್ಛತೆಯ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ನೆರವೇರಿಸಬೇಕು.
ಅದರಂತೆ ಕರಪತ್ರಗಳ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕೆಂದು ಸರಕಾರದ ಅನುದಾನದ ಸರಿಯಾಗಿ ಬಳಸಿಕೊಳ್ಳಲು ಸೂಚಿಸಬೇಕು. ನಿರ್ಮಿಸಿಕೊಂಡ ಶೌಚಾಲಯಗಳನ್ನು ಸರಿಯಾಗಿ ಉಪಯೋಗಿಸದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರಿಂದ ಬಡ್ಡಿಸಮೇತ ಬಳಸಿಕೊಂಡ ಅನುದಾನವನ್ನು ಮರಳಿ ಪಡೆಯಬೇಕು ಅಂದಾಗ ನಾವು ನಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದಂತಾಗುತ್ತದೆ. ಒಂದು ವೇಳೆ ಇಂತಹ ಕರ್ತವ್ಯಗಳಲ್ಲಿ ನಿರ್ಲಕ್ಷತೆ ಕಂಡುಬAದಲ್ಲಿ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಅಂಥವರ ವಿರುದ್ಧ ಶಿಸ್ತಿನ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಕುಡಿಯುವ ನೀರು ಸಾರ್ವಜನಿಕರ ಮೂಲಭೂತ ಹಕ್ಕು. ಆದುದರಿಂದ ತಾಲೂಕಿನಲ್ಲಿ ಎಷ್ಟು ಶುದ್ಧನೀರಿನ ಘಟಕಗಳು ಇವೆ ಎಂಬುದನ್ನು ಪರಿಶೀಲಿಸಿ, ಶೀಘ್ರವಾಗಿ ವರದಿ ಸಲ್ಲಿಸಬೇಕು. ಹದಗೆಟ್ಟ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ, ಅಂಗನವಾಡಿ ಮಕ್ಕಳಿಗೆ ಸರಿಯಾದ ರೀತಿಯ ಪೌಷ್ಠಿಕ ಆಹಾರ ದೊರೆಯುತ್ತಿಲ್ಲ, ಆಹಾರವು ಅನರ್ಹರ ಪಾಲಾಗುತ್ತಿದೆ ಎಂಬ ದೂರುಗಳು ಬಂದಿದ್ದು, ಈ ರೀತಿಯಾಗದಂತೆ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಎಚ್ಚರವಹಿಸಬೇಕು. ಮುಂದೊAದು ದಿನ ತಾವು ಭೇಟಿಕೊಟ್ಟಾಗ ಇಂತಹ ದೂರುಗಳು ಬಂದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರೈತರು ಬೆಳೆದ ಬೆಳೆಗಳಿಗೆ ಅನುಸಾರವಾಗಿ ರಸಗೊಬ್ಬರ ಕ್ರಿಮಿನಾಶಕ ಬಳಸಿಕೊಳ್ಳಲು ಸಲಹೆ ಸೂಚನೆ ನೀಡಬೇಕು. ಇದಕ್ಕಾಗಿ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಬಾಗಲಕೋಟೆ ಹಾಗೂ ವಿಜಯಪುರ ಕೃಷಿ ವಿಶ್ವವಿದ್ಯಾಲಯಗಳ ಸಹಕಾರ ಪಡೆದುಕೊಳ್ಳಬೇಕು. ರೈತರು ತಮ್ಮ ಹತ್ತಿರ ಬರಲು ಹಿಂದೇಟು ಹಾಕಬಹುದು ಅದನ್ನು ಗಮನಿಸಿ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಉಪಯುಕ್ತ ಸಲಹೆ ನೀಡಬೇಕು ಎಂದು ಹೇಳಿದರು.
ಅಕ್ಕನಾಗಮ್ಮ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿರುವ ಮಕ್ಕಳೊಂದಿಗೆ ಮಾತನಾಡಿದರು. ಶಾಲೆಯಲ್ಲಿರುವ ಅನುಕೂಲ ಹಾಗೂ ಅನಾನುಕೂಲ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಶಾಲೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ವೈದ್ಯರುಗಳಿಗೆ ಬರುವ ರೋಗಿಗಳಿಗೆ ಉತ್ತಮವಾಗಿ ಸ್ಪಂದಿಸುತ್ತಿರುವ ಸ್ವಚ್ಛತೆಯ ಬಗ್ಗೆಯೂ ಕೂಡ ಪ್ರಶಂಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಯಶೋಧಾ ಒಂಟಗೋಡಿ, ಲೋಕಾಯುಕ್ತ ಡಿವೈಎಸ್ಪಿ ಶ್ರೀ ಯಲಿಗಾರ, ತಹಶೀಲ್ದಾರ ಬಳಿಗಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

- Advertisement -

Leave A Reply

Your email address will not be published.