ರಾಷ್ಟ್ರೀಯ ಯುವ ದಿನ ಆಚರಣೆ

ಗದಗ  12:  ಜಿಲ್ಲಾಡಳಿತ ಭವನದ  ಮುಖ್ಯ ಸಭಾಂಗಣದಲ್ಲಿಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು  ಸರಳವಾಗಿ ಆಚರಿಸಲಾಯಿತು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಭಾರಿ ಜಿಲ್ಲಾಧಿಕಾರಿ  ಡಾ. ಆನಂದ್ ಕೆ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.  ಯುವಜನ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಬಿ. ವಿಶ್ವನಾಥ , ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ನಿರ್ಭಯಾನಂದ ಸರಸ್ವತಿ  ಹಾಜರಿದ್ದರು.

Leave A Reply

Your email address will not be published.