Koppal

ಯುವ ಜನಾಂಗ ಶಿಕ್ಷಣದ ಜೊತೆಗೆ ಕೌಶಲ್ಯ ತರಬೇತಿ ಪಡೆಯುವುದು ಅವಶ್ಯ : ಗವಿಶಂಕರ್


ಕೊಪ್ಪಳ ಜ.12: ದೇಶದ ಅಭಿವೃದ್ಧಿಯಲ್ಲಿ ಯುವಜನಾಂಗದ ಪಾತ್ರ ಪ್ರಮುಖವಾಗಿದ್ದು, ಯುವಕರು ಶಿಕ್ಷಣದ ಜೊತೆಗೆ ಕೌಶಲ್ಯ ತರಬೇತಿಯನ್ನು ಪಡೆಯುವುದು ಅವಶ್ಯವಾಗಿದೆ ಎಂದು ಜಿಲ್ಲಾ ಕೌಶಲ್ಯ ಮಿಷನ್‌ನ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಕೊಪ್ಪಳದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಗವಿಶಂಕರ್ ಕೆ. ಅವರು ಹೇಳಿದರು.
ರಾಷ್ಟಿçÃಯ ಯುವ ದಿನದ ಅಂಗವಾಗಿ ಮಂಗಳವಾರದAದು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಟಣಕನಕಲ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿನ 18 ರಿಂದ 35 ವರ್ಷದೊಳಗಿನ ಯುವಕ/ಯುವತಿಯರಿಗಾಗಿ ಟಣಕನಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕೌಶಲ್ಯ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಯಾವುದೇ ಉದ್ಯೋಗದಲ್ಲಿ ವಿದ್ಯಾರ್ಹತೆಯೊಂದಿಗೆ ಕೌಶಲ್ಯಗಳು ಪ್ರಮುಖವಾಗುತ್ತವೆ. ಆದ್ದರಿಂದ ಈಗಿನಿಂದಲೇ ವಿವಿಧ ಕೌಶಲ್ಯಗಳ ತರಬೇತಿ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಯಾಗಬಹುದು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಉದ್ಯೋಗ ವಿನಿಯಮ ಅಧಿಕಾರಿ ಪ್ರಾಣೇಶ್ ಎಸ್, ತರಬೇತಿ ಅಧಿಕಾರಿಗಳಾದ ಸಂಪತ್ ಕುಮಾರ, ದತ್ತಾತ್ರೇಯ ಅವರು ಕೌಶಲ್ಯ ಅಭಿವೃದ್ಧಿ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕೊಪ್ಪಳದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಯಮ ಕಛೇರಿಯ ಸಿಬ್ಬಂದಿ, ಜಿಲ್ಲಾ ಸಂಯೋಜಕರಾದ ತಿಪ್ಪೇಸ್ವಾಮಿ ಹೆಚ್., ಹಾಗೂ ಜಿಲ್ಲೆಯ ಸರ್ಕಾರಿ/ಸರ್ಕಾರೇತರ ತರಬೇತಿ ಸಂಸ್ಥೆಗಳಲ್ಲಿ ವಿವಿಧ ತರಬೇತಿ ಪಡೆಯುತ್ತಿರುವ ಫಲಾನುಭವಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಜಿಲ್ಲಾ ಕೌಶಲ್ಯ ಮಿಷನ್‌ನ ಅಹ್ಮದ್‌ಹುಸೇನ್ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಎಸ್.ಪಿ, ಸ್ವಾಗತಿಸಿದರು. ಉಪಸ್ಥಿತರಿಗೆ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಕೈಪಿಡಿಯನ್ನು ವಿತರಿಸಲಾಯಿತು.


Leave a Reply