ಬ್ರೆöÊಲ್ ಕಿಟ್‌ಗಾಗಿ ಅರ್ಹರಿಂದ ಅರ್ಜಿ ಆಹ್ವಾನ

ಕೊಪ್ಪಳ ಜ.೧೩ : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ೨೦೨೦-೨೧ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಬ್ರೆöÊಲ್ ಕಿಟ್‌ಗಳಾದ ಟಾಕಿಂಗ್ ಮೊಬೈಲ್, ಬ್ರೆöÊಲ್ ವಾಚ್, ವಾಕಿಂಗ್ ಸ್ಟಿಕ್ ವಿತರಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ, ಅಂಗವಿಕಲರ ಗುರುತಿನ ಚೀಟಿ, ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬAಧಿತ ಕಾಲೇಜಿನ ಪ್ರಾಂಶುಪಾಲರಿAದ ದೃಢೀಕರಣ ಪತ್ರ, ಜಾತಿ ಮತ್ತು ವಾಸಸ್ಥಳ ಪ್ರಮಾಣ ಪತ್ರ, ಇತ್ತೀಚಿನ ೨ ಭಾವಚಿತ್ರಗಳು ಹಾಗೂ ಬೇರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿAದ ಬ್ರೆöÊಲ್ ಕಿಟ್‌ಗಳನ್ನು ಪಡೆದಿರುವುದಿಲ್ಲ ಎಂಬ ಸ್ವಯಂ ದೃಢೀಕರಣ ಪತ್ರದೊಂದಿಗೆ ಜ. ೩೦ ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ  ಹಾಗೂ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂ.ಸಂ:೦೮೫೩೯-೨೯೫೪೬೦ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.