ವಿಜಯಪುರ ಜ.೧೩: ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಕಳ್ಳಿಮನಿ ಅವರು ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ವಿಜಯಪುರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ ತಾಲೂಕಿನ ಅರಕೇರಿ ಗ್ರಾಮದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ದಿನಾಂಕ : ೧೫-೦೧-೨೦೨೧ ರಂದು ಸಾಯಂಕಾಲ ೬-೦೦ ಗಂಟೆಯಿAದ ಬೆಳಿಗ್ಗೆ ೮-೦೦ ಗಂಟೆಯವರೆಗೆ ವಸತಿ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರೊಂದಿಗೆ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -