vijayapur

ಜ.೧೫ ರಂದು ಜಿಲ್ಲಾಡಳಿತದಿಂದ ಸರಳವಾಗಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ


ವಿಜಯಪುರ ಜ.: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ದಿನಾಂಕ : ೧೪-೦೧-೨೦೨೧ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಕೋವಿಡ್ ಹಿನ್ನೆಲೆ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಜಯಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಎಲ್ಲಾ ಸಮಾಜ ಬಾಂಧವರು, ಅಭಿಮಾನಿ ಬಳಗದವರು ಹಾಗೂ ವಿವಿಧ ಸಂಘಟನೆಯವರು ಆಗಮಿಸಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply