Belagavi

ಜ.೧೫ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉತ್ಸವ


ಬೆಳಗಾವಿ ೧೩, : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಜ.೧೫) ಬೆಳಿಗ್ಗೆ ೧೧ ಗಂಟೆಗೆ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉತ್ಸವ ಆಚರಿಸಲಾಗುವುದು.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಇಲಾಖೆ ಸಚಿವರು ಲಕ್ಷö್ಮಣ ಸಂ. ಸವದಿ ಘನ ಉಪಸ್ಥಿತರಿರುವರು.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಮೈತ್ರೇಯಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ಮಾಡಲಿದ್ದು, ಸಂಗೀತ ಕಾರ್ಯಕ್ರಮ ಬಸವರಾಜ ತಿಮ್ಮಾಪೂರ ಅಂದ ಕಲಾವಿದರಿಂದ ನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮತ್ತು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಶ್ರೀಮಂತ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕರು ಅನಿಲ ಎಸ್. ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ ಚ. ಮಾಮನಿ, ನವದೆಹಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾದ ಶಂಕರಗೌಡ ಐ. ಪಾಟೀಲ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆಶಾ ಐಹೊಳೆ, ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಶಾಸಕರಾದ ಪಿ. ರಾಜೀವ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರಾದ ಮಹೇಶ ಕುಮಠಳ್ಳಿ, ಉಪಸ್ಥಿತರಿರುವರು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ. ಹೀರೆಮಠ ಅವರು ತಿಳಿಸಿದ್ದಾರೆ.


Leave a Reply