ಮಹಿಳಾ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ.ಜ.11 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪ್ರೆಂಟಿಸ್ ಅವಧಿಯು ಹತ್ತು ತಿಂಗಳದ್ದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
ಪ್ರತಿ ಮಾಹೆ ಒಬ್ಬ ಮಹಿಳೆಗೆ 15 ಸಾವಿರ ರೂ.ರಂತೆ ಇಬ್ಬರಿಗೆ 30 ಸಾವಿರ ಸಂಭಾವನೆ ನೀಡಲಾಗುವುದು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯಾ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆಯಾ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ಸಿಗದಿದ್ದಲ್ಲಿ ಅಕ್ಕ ಪಕ್ಕದ ಜಿಲ್ಲೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ, ಅರ್ಜಿ ಸಲ್ಲಿಸುವವರ ವಯೋಮಿತಿ 40 ವರ್ಷದೊಳಗಿರಬೇಕು.
ಅರ್ಜಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಳ್ಳಾರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಇದೇ ಜ.25ರೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಅರ್ಜಿ ನಮೂನೆ ಹಾಗೂ ಇನ್ನೀತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಕಚೇರಿ ಅಥವಾ ದೂ:08392-275198 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.