whatsapp facebooktwitter

ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಳಸಿ: ಎಮ್.ಜಿ.ಹಿರೇಮಠ

ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಳಸಿ: ಎಮ್.ಜಿ.ಹಿರೇಮಠ

11-08-2020 08:32 PM

ಬೆಳಗಾವಿ, ಆ. ೧೧ : ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ರಾಜ್ಯ ಸರಕಾರ ವತಿಯಿಂದ ಪ್ರಾರಂಭಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆಯ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದ್ದು, ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲೂಕ ಆಡಳಿತ ಪರಿಶೀಲಿಸಲಿದೆ.
ವಿಧಾನ:
ರೈತರು ಸ್ಮಾರ್ಟಫೋನ್ ಉಪಗಿಸಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‌ನ್ನು ಗೂಗಲ್‌ನ ಪ್ಲೇ ಸ್ಟೋರ್(Pಟಚಿಥಿ Sಣoಡಿe) ದಿಂದ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ ಅಥವಾ ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬAಧಿಕರು ಅಥವಾ ಮೊಬೈಲ್ ಮಾಹಿತಿ ಹೊಂದಿರುವ ಕಂದಾಯ/ಕೃಷಿ ಇಲಾಖೆ ವತಿಯಿಂದ ನಿಯೋಜನೆಗೊಂಡ ತಮ್ಮದೆ ಗ್ರಾಮದ ಮಾಹಿತಿ ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇರುವ ಯುವಕರ (ಖಾಸಗಿ ನಿವಾಸಿ/ಪಿ.ಆರ್) ಸಹಾಯದೊಂದಿಗೆ ರೈತರು ತಮ್ಮ ಮೊಬೈಲ್ ಸಂಖ್ಯೆಗೆ ಔಖಿP ಪಡೆಯುವ ಮೂಲಕ ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಅಪಲೋಡ ಮಾಡಬಹುದಾಗಿದೆ.
ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಅಪ್ಲೋಡ್

Advertise
Advertise

ಮಾಡದೇ ಇದ್ದ ಪಕ್ಷದಲ್ಲಿ ಪ್ರತಿ ಗ್ರಾಮಕ್ಕೆ ನಿಯೋಜನೆಗೊಂಡ ಬೆಳೆ ಸಮೀಕ್ಷಕರು (ಖಾಸಗಿ ನಿವಾಸಿ/ಪಿ.ಆರ್) ತಮ್ಮ ಹೊಲಗಳಿಗೆ ಭೇಟಿ ನೀಡಿ ಮೊಬೈಲ್ ಆ್ಯಪ್ ಬಳಸಿ ಬೆಳೆ ಮಾಹಿತಿ ಸಂಗ್ರಹಿಸಿ ಅಪಲೋಡ್ ಮಾಡುತ್ತಾರೆ.
ಯೋಜನೆಯ ಉದ್ದೇಶ:
ಬೆಳೆ ಸಮೀಕ್ಷೆ ಯೋಜನೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ವಿಸ್ತೀರ್ಣ ಏಣಿಕಾ ಕಾರ್ಯದಲ್ಲಿ ಬಳಸಲು ಅನುಮತಿಸಲಾಗಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಓಆಖಈ/Sಆಖಈ ಅಡಿಯಲ್ಲಿ ಸಹಾಯಧನ ನೀಡಲು ವರದಿ ತಯಾರಿಸಲು ಉಪಯೋಗಕಾರಿ ಯಾಗಲಿದೆ.
ಬೆಳೆ ವಿಮೆ ಯೋಜನೆಯಡಿ ರೈತರ ತಾಕುವಾರು ಬೆಳೆ ಪರಿಶೀಲಿಸಿ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಬಹುದಾಗಿದೆ. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಮಾಡದಬುದಾಗಿದೆ.
ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ, ಜಿಲ್ಲ್ಲೆಯ ಎಲ್ಲಾ ರೈತರು ರೈತರು ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‌ನಲ್ಲಿ ನಿಗದಿತ ಸಮಯದೊಳಗೆ ಅಪ್ಲೋಡ್ ಮಾಡಿ ಕಡ್ಡಾಯವಾಗಿ ಈ ಒಂದು ವಿನೂತನ ಬೆಳೆ ಸಮೀಕ್ಷೆ ಯೋಜನೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos