whatsapp facebooktwitter

ಮಗುವಿನ ಪೋಷಕತ್ವ ಯೋಜನೆ: ಅರ್ಜಿ ಆಹ್ವಾನ

ಮಗುವಿನ ಪೋಷಕತ್ವ ಯೋಜನೆ: ಅರ್ಜಿ ಆಹ್ವಾನ

11-08-2020 08:33 PM

ಬೆಳಗಾವಿ, ಆ. ೧೧ : ಬಾಲನ್ಯಾಯ ಕಾಯ್ದೆ ೨೦೧೫ ಸೆಕ್ಷನ್ ೪೪ ರ ಅನ್ವಯ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ಪಾಲನೆ ಹಾಗೂ ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಗುವಿಗೆ ಸಂಬAಧವಿಲ್ಲದ ಕುಟುಂಬಕ್ಕೆ ತಾತ್ಕಾಲಿಕವಾಗಿ ಅಥವಾ ವಿಸ್ತರಿಸಲ್ಪಟ್ಟ ಒಂದು ವರ್ಷದ ಅವಧಿಗೆ ಮೀರದಂತೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ . ಮಗು ಹಾಗೂ ಕುಟುಂಬದ ಹೊಂದಾಣಿಕೆಯ ಆಧಾರದ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ, ಮಗುವನ್ನು ೧೮ ವರ್ಷದ ವಯಸ್ಸಿನವರೆಗೂ ಪೋಷಕತ್ವ ಮುಂದುವರಿಸಲು ಅವಕಾಶ ಕಲ್ಪಿಸಬಹುದಾಗಿದೆ.
ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿದ್ದು ವಿವಿಧ ಕಾರಣಗಳಿಂದ ಕೆಲವು ಮಕ್ಕಳನ್ನು ಸರಕಾರಿ, ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ, ಇಂತಹ ಸಂದರ್ಭದಲ್ಲಿ ಮಗುವನ್ನು ಮಗುವಿನ ಸ್ವಂತ

Advertise
Advertise

ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಅಂತಹ ಮಕ್ಕಳಿಗೆ ಪೋಷಕತ್ವ ಯೋಜನೆಯಡಿಯಲ್ಲಿ ಇತರ ಕುಟುಂಬದಲ್ಲಿ ಬೆಳೆಯಲು ಮಗುವಿನ ಹಿತದೃಷ್ಟಿಯಿಂದ ಮಕ್ಕಳ ಕಲ್ಯಾಣ ಸಮಿತಿ ತೀರ್ಮಾನವನ್ನು ತೆಗೆದುಕೊಳ್ಳಬಹುದಾಗಿದೆ.
ಈ ಹಿನ್ನೆಲೆಯಲ್ಲಿ ೬ ರಿಂದ ೧೮ ವರ್ಷದೊಳಗಿನ ವಿವಿಧ ಕಾರಣಗಳಿಗೆ ಬೆಳಗಾವಿ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ನೋಡಿಕೊಳ್ಳಲು ಆಸಕ್ತಿ ಇರುವ ಪೋಷಕರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿಂದುಗಡೆ ಶಿವಂ ರೆಸಿಡೆನ್ಸಿ ಎದುರುಗಡೆ, ಶಾರದಾ ಎನ್‌ಕ್ಲೀವ್ ಪ್ಲಾಟ್ ನಂ .೫೫, ಸಿ.ಟಿ.ಎಸ್.ನಂ.೯೨೧೬ ೧ ನೇ ಮಹಡಿ, ಶಿವಬಸವ ನಗರ, ಬೆಳಗಾವಿ ದೂರವಾಣಿ ಸಂಖ್ಯೆ ೦೮೩೧-೨೪೭೪೧೧೧ಕ್ಕೆ ಸಂಪರ್ಕಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ರತ್ನಾಕರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos